ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ: ಹಿಂದೂ ಯುವತಿಗೆ ಡ್ರಾಪ್ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಧರ್ಮಸ್ಥಳ: ಹಿಂದೂ ಯುವತಿಗೆ ಡ್ರಾಪ್ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

 

ಬೆಳ್ತಂಗಡಿ : ಯುವತಿಯನ್ನು ಡ್ರಾಪ್ ಮಾಡಿದ್ದಕ್ಕೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ಆಟೋ ಚಾಲಕನ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಧರ್ಮಸ್ಥಳ ನಿವಾಸಿ ಅವಿನಾಶ್(26) , ನಂದೀಪ್(20), ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಅಕ್ಷತ್(22) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು, ಆ.02ರಂದು ರಾತ್ರಿ ತನ್ನ ಊರಾದ ಬೆಂಗಳೂರಿಗೆ ವಾಪಾಸ್ ಆಗುವ ವೇಳೆ ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ತೆರಳಲು ಆಟೋ ಚಾಲಕ ಅತ್ತಾಜೆ ನಿವಾಸಿ ಮೊಹಮ್ಮದ್ ಅಶಿಕ್ ಅವರಿಗೆ ಕರೆ ಮಾಡಿದ್ದಳು. ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9 ಗಂಟೆಗೆ ಅವಳನ್ನು ಡ್ರಾಪ್ ಮಾಡಿ ಹಿಂದಿರುಗುವಾಗ ಈ ಮೂರು ಜನ ‘ನಿನಗೆ ಹಿಂದೂ ಯುವತಿಯರೇ ಬೇಕಾ’ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರಿಗೂ ನ್ಯಾಯಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!