ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಂದ್ರನ ಮೇಲೆ "ವಿಕ್ರಮ" ವಿಜಯ, ಸಂತಸ ಹಂಚಿಕೊಂಡ ಡಾ. ಡಿ. ವೀರೇಂದ್ರ ಹೆಗ್ಗಡೆ: ಶ್ರಮಿಸಿದ ವಿಜ್ಞಾನಿಗಳಿಗೆ ಅಭಿನಂದನೆ:

ಚಂದ್ರನ ಮೇಲೆ "ವಿಕ್ರಮ" ವಿಜಯ, ಸಂತಸ ಹಂಚಿಕೊಂಡ ಡಾ. ಡಿ. ವೀರೇಂದ್ರ ಹೆಗ್ಗಡೆ: ಶ್ರಮಿಸಿದ ವಿಜ್ಞಾನಿಗಳಿಗೆ ಅಭಿನಂದನೆ:

 

 

ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ. ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಸ ಹಂಚಿಕೊಂಡಿದ್ದಾರೆ.

ಈ ಅದ್ಭುತ ಯಶಸ್ಸಿಗೆ ಭಗೀರಥ ಪ್ರಯತ್ನ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರನ್ನೂ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಇದೊಂದು ವಿಶ್ವದಾಖಲೆಯಾಗಿದ್ದು ಭಾರತದ ಕೀರ್ತಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಹೆಚ್ಚಾಗಿದೆ.

ಚಂದ್ರನನ್ನು ಈ ಸಂಭ್ರಮ - ಸಡಗರದ ಸಂದರ್ಭದಲ್ಲಿ ಸ್ಮರಿಸಿ ದೂರದಿಂದಲೇ ಪರಿಚಯವಾದ ಚಂದ್ರನನ್ನು ಅತೀ ಸಮೀಪಕ್ಕೆ ತಂದ ಎಲ್ಲಾ ಬಾಹ್ಯಾಕಾಶ ವಿಜ್ಞಾನಿಗಳನ್ನು ಮತ್ತು ತಂತ್ರಜ್ಞರನ್ನು ನಮ್ಮ ದೇಶದ ಎಲ್ಲಾ ಪ್ರಜೆಗಳ ಪರವಾಗಿ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ.

ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮುಂದೆ ಇನ್ನೂ ಹೆಚ್ಚಿನ ಸೇವೆ - ಸಾಧನೆ ಮಾಡಿ ಯಶಸ್ಸನ್ನು ಪಡೆಯುವಂತೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಧರ್ಮದೇವತೆಗಳು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ.ಎಂದು ಶುಭ ಹಾರೈಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!