ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌಜನ್ಯ ಮನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ನಾಗನ್ನ ಗೌಡ ಭೇಟಿ:

ಸೌಜನ್ಯ ಮನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ನಾಗನ್ನ ಗೌಡ ಭೇಟಿ:

 

 

 

ಬೆಳ್ತಂಗಡಿ : ಅತ್ಯಾಚಾರ ಹಾಗೂ ಕೊಲೆಯಾದ ಸೌಜನ್ಯ ಮನೆಗೆ ಹಾಗೂ ಘಟನಾ ಸ್ಥಳಕ್ಕೆ ಆಗಸ್ಟ್ 20 ರಂದು ಸಂಜೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ನಾಗನ್ನ ಗೌಡ ಭೇಟಿ ನೀಡಿದರು.

ಮೊದಲು ಕೊಲೆಯಾಗಿ ಪತ್ತೆಯಾದ ನೇತ್ರಾವತಿ ಮಣ್ಣಸಂಕ ಪ್ರದೇಶಕ್ಕೆ ಭೇಟಿ ನೀಡಿ ಧರ್ಮಸ್ಥಳ ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ನಂತರ ಸೌಜನ್ಯಳ ಪಾಂಗಾಳ ಮನೆಗೆ ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.

ನಾಗನ್ನ ಗೌಡ ಜೊತೆಯಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ , ಸಿಡಿಪಿಓ ಪ್ರಿಯಾ ಅಗ್ನೇಸ್ ಮತ್ತಿತರರು ಭಾಗಿಯಾಗಿದ್ದರು. ಅಲ್ಲಿಂದ ನೇರ ಬೆಳ್ತಂಗಡಿ ಐಬಿ ಗೆ ತೆರಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!