ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಹಾಗು ಸಕಲೇಶಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್ ಮಧ್ಯೆ ಅಪಘಾತ ನಡೆದಿದೆ. ಭೀಕರ ಅಪಘಾತದಲ್ಲಿ ಬೆಂಗಳೂರಿನ ಕೋಣನಕುಂಟೆಯ ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಪ್ರಯಾಣಿಕ ಶಿವಯಾಗಯ್ಯ ಹಿರೇಮಠ್ ಅವರ ಸ್ಥಿತಿ ಗಂಭೀರವಾಗಿದ್ದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Home › ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ: ತಾಯಿ-ಮಗ ಸ್ಥಳದಲ್ಲೇ ಸಾವು: ಇನ್ನೋರ್ವ ಗಂಭೀರ: ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಘಟನೆ..!