ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಚಾರ್ಮಾಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರ ಅಣಿಯೂರು ಕಕ್ಕಿಂಜೆ, ಮುಂಡಾಜೆ, ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿಯಲ್ಲಿ ಆ.31ರಂದು ನಡೆಯಿತು.

ಮುಂಡಾಜೆ- ಅಣಿಯೂರು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ ಉದ್ಘಾಟಿಸಿದರು. ಈ ಸಂಧರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯರು ನಾಗೇಶ್ ಚಾರ್ಮಾಡಿ ಮತ್ತು ಆಯಿಷಾ ಬೇಗಂ, ಬಂಗಾಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ರಮೇಶ್, ಉಜಿರೆ ವಲಯ ಕ್ರೀಡಾ ಸಂಯೋಜಕರು ದೇವಸ್ಯ ಸಿ.ಎ, ಚಾರ್ಮಾಡಿ ಶಾಲಾ ದೈಹಿಕ ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕರು ಹುಚ್ಚವೀರಯ್ಯ ಸ್ವಾಗತಿಸಿ ಸಹಶಿಕ್ಷಕರು ಚಂದ್ರಪ್ಪ ಧನ್ಯವಾದವಿತ್ತರು. ಸಹಶಿಕ್ಷಕಿ ಮಂಜುಳ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!