ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌಜನ್ಯ ನ್ಯಾಯಕ್ಕಾಗಿ ಆದಿಚುಂಚನಗಿರಿ ಮಠಕ್ಕೆ ಭೇಟಿ:

ಸೌಜನ್ಯ ನ್ಯಾಯಕ್ಕಾಗಿ ಆದಿಚುಂಚನಗಿರಿ ಮಠಕ್ಕೆ ಭೇಟಿ:

 

 

 

ಬೆಳ್ತಂಗಡಿ : ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದ್ದು, ಆ.13ರಂದು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ, ತಂದೆ ಚಂದಪ್ಪ ಗೌಡ ಹಾಗೂ ಮನೆಯವರು ಜೊತೆಯಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಮತ್ತು ಪ್ರಸನ್ನನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ನೀಡಿ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟಕ್ಕೆ ಗುರುಗಳ ಆಶೀರ್ವಾದ ಮತ್ತು ಬೆಂಬಲವನ್ನು ಕೇಳಿಕೊಂಡರು.

 

 

 

ಈ ನ್ಯಾಯಪರ ಹೋರಾಟಕ್ಕೆ ಮಹಾಸಂಸ್ಥಾನದ ಮಹಾಸ್ವಾಮೀಜಿಯವರು ಬೆಂಬಲವನ್ನು ಸೂಚಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಸೌಜನ್ಯ ಮನೆಯವರು ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರು ಆದಿಚುಂಚನಗಿರಿ ದೇವಸ್ಥಾನಕ್ಕೆ ಭೇಟಿ ನೀಡಿ ಕಾಲಬೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಸೌಜನ್ಯಳಿಗೆ ನ್ಯಾಯ ದೊರಕುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!