ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ: ಸೆ 24 ರಂದು ಮನವಿ ಪತ್ರ ಬಿಡುಗಡೆ ಸಮಾರಂಭ:

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ: ಸೆ 24 ರಂದು ಮನವಿ ಪತ್ರ ಬಿಡುಗಡೆ ಸಮಾರಂಭ:

 

 

 

ಬೆಳ್ತಂಗಡಿ: ವೇಣೂರಿನಲ್ಲಿ 2024ರ ಫೆಬ್ರವರಿ 22 ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಮನವಿ ಪತ್ರ ಬಿಡುಗಡೆ ಸಮಾರಂಭವು ಸೆಪ್ಟೆಂಬರ್‌ 24 ರಂದು ಆದಿತ್ಯವಾರ ಸಂಜೆ 5 ಗಂಟೆಗೆ ವೇಣೂರು ಬಾಹುಬಲಿ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮನವಿ ಪತ್ರ ಬಿಡುಗಡೆಗೊಳಿಸುವರು. ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಶುಭಾಶಂಸನೆ ಮಾಡುವರು. ಎಂದು ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!