ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚುರುಕು ಪಡೆದ ನೈರುತ್ಯ ಮುಂಗಾರು: ಕರಾವಳಿಗೆ ಯೆಲ್ಲೋ ಅಲರ್ಟ್..!

ಚುರುಕು ಪಡೆದ ನೈರುತ್ಯ ಮುಂಗಾರು: ಕರಾವಳಿಗೆ ಯೆಲ್ಲೋ ಅಲರ್ಟ್..!

ಸಾಂದರ್ಭಿಕ ಚಿತ್ರ

ಬೆಂಗಳೂರು: ನೈರುತ್ಯ ಮುಂಗಾರು ವೇಗ ಪಡೆದಿದ್ದು ಕರಾವಳಿಯ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ.1ರವರೆಗೆ ಮಳೆ ಮುಂಗಾರು ಚುರುಕುಗೊಳ್ಳಲಿದ್ದು ಈ ಮೂರು ಜಿಲ್ಲೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಸೆಪ್ಟೆಂಬರ್ 30ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಮತ್ತು ಅಕ್ಟೋಬರ್ 1 ರಂದು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!