ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಲಾರಿ -ಟೆಂಪೊ ಟ್ರಾವೆಲ್ಲರ್ ಡಿಕ್ಕಿ: ರಸ್ತೆ ಸಂಚಾರ ಜಾಮ್..!

ಬೆಳ್ತಂಗಡಿ: ಲಾರಿ -ಟೆಂಪೊ ಟ್ರಾವೆಲ್ಲರ್ ಡಿಕ್ಕಿ: ರಸ್ತೆ ಸಂಚಾರ ಜಾಮ್..!

ಬೆಳ್ತಂಗಡಿ:  ಜೆಸಿಬಿ ಸಾಗಿಸುತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕೆಲವರಿಗೆ ಸಣ್ಣಪುಟ್ಟ  ಗಾಯಗಳಾದ ಘಟನೆ ಅ.21ರಂದು ಬೆಳಗ್ಗೆ ಬೆಳ್ತಂಗಡಿಯ ಗುರುವಾಯನಕೆರೆ ಬಳಿ ನಡೆದಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್ ಗೆ ಎದುರುಗಡೆಯಿಂದ ಬರುತಿದ್ದ ಟೆಂಪೋ ಟ್ರಾವೆಲರ್ ವಾಹನವು ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ,  ಲಾರಿಯ ಒಂದು ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತ ನಡೆದ ಸ್ಥಳದಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು ವಾಹನಗಳು ಸುಮಾರು 1 ಗಂಟೆಗಿಂತಲೂ ಹೆಚ್ಚು ಹೊತ್ತು, ಕಿಲೋ ಮೀಟರ್ ಗಟ್ಟಲೆ ಸಾಲು ಗಟ್ಟಿ ನಿಂತಿದೆ.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!