ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಳೆಂಜ , ಅಮ್ಮಿನಡ್ಕ ಪ್ರಕರಣ ತಾತ್ಕಾಲಿಕ ಸುಖಾಂತ್ಯ: ಸ್ಥಳಕ್ಕೆ ಡಿಎಫ್ಒ ಭೇಟಿ ಜಂಟಿ ಸರ್ವೇ ಬಳಿಕ ಮುಂದಿನ ಕ್ರಮ:

ಕಳೆಂಜ , ಅಮ್ಮಿನಡ್ಕ ಪ್ರಕರಣ ತಾತ್ಕಾಲಿಕ ಸುಖಾಂತ್ಯ: ಸ್ಥಳಕ್ಕೆ ಡಿಎಫ್ಒ ಭೇಟಿ ಜಂಟಿ ಸರ್ವೇ ಬಳಿಕ ಮುಂದಿನ ಕ್ರಮ:

 

 

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ (DFO) ಆಂಟೋನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಶ್ರಿಮಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು. ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಓ, ಎಸಿಎಫ್, ಆರ್.ಎಫ್.ಒ. ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿ ಯೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ,‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣಕ್ಕೆ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಈ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಓ ಭರವಸೆ ನೀಡಿದರು.

ಅರಣ್ಯಧಿಕಾರಿಗಳು ಮುಂಜಾನೆ 7 ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿರುವ ಮಾಹಿತಿ ತಿಳಿದ ತಕ್ಷಣವೇ ಶಾಸಕ ಹರೀಶ್ ಪೂಂಜ, ಜಿಲ್ಲೆಯ ಶಾಸಕರಾದ ರಾಜೇಶ್ ನಾಯಕ್, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಉಮಾನಾಥ್ ಕೋಟ್ಯಾನ್, ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಸ್ಥಳಕ್ಕೆ ತೆರಳಿ ತೆರವುಗೊಳಿಸದಂತೆ ತಡೆಯೊಡಿದರಲ್ಲದೇ ಡಿಎಫ್ಒ ಬರುವಂತೆ ಪಟ್ಟು ಹಿಡಿದರು. ನಂತರ ಡಿಎಫ್ಒ ಸ್ಥಳಕ್ಕೆ ಭೇಟಿ ನೀಡಿ ಶಾಸಕರುಗಳಲ್ಲಿ ಮಾತುಕತೆ ನಡೆಸಿ ಕೊನೆಗೆ ಸರ್ವೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದರು. ಈ ವೇಳೆ ಅರುಣ್ ಪುತ್ತಿಲ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!