ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಿ.ಎಂ ಪದದ ಅರ್ಥ ಬದಲಿಸಿ ನಾಮಫಲಕ ಎಡಿಟ್ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್.ಐ.ಆರ್..!

ಸಿ.ಎಂ ಪದದ ಅರ್ಥ ಬದಲಿಸಿ ನಾಮಫಲಕ ಎಡಿಟ್ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್.ಐ.ಆರ್..!

ಬೆಳ್ತಂಗಡಿ : ಸಿಎಂ  ಪದದ ಅರ್ಥವನ್ನು ಬದಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಮಫಲಕ ಎಡಿಟ್ ಮಾಡಿ ಫೆಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್  ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಫೋಟೊ ಮುಂದೆ ಹಾಗೂ ಗೃಹಕಚೇರಿ ಕಾವೇರಿ ನಿವಾಸದ ಗೇಟ್‌ನಲ್ಲಿ ‘ಕಲೆಕ್ಷನ್ ಮಾಸ್ಟರ್ ಸಿದ್ದರಾಮಯ್ಯ’ ಎಂದು ಎಡಿಟ್ ಮಾಡಿ, ಆ ಪೋಸ್ಟ್ ನ್ನು ಶಾಸಕ ಹರೀಶ್ ಪೂಂಜರ ಪ್ರೊಫೈಲ್  ಇರುವ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಈ ವಿಚಾರವಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

 

ಈ ಹಿನ್ನಲೆ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.26 ರಂದು IPC ಸಿ 1869 U/S 504, 505(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!