ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ, ಡಿವೈಡರ್ ಗೆ ಬೈಕ್ ಡಿಕ್ಕಿ‌ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಾವು:

ಉಜಿರೆ, ಡಿವೈಡರ್ ಗೆ ಬೈಕ್ ಡಿಕ್ಕಿ‌ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಾವು:

 

 

 

ಬೆಳ್ತಂಗಡಿ : ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯಲ್ಲಿ ನ.23 ರಂದು(ಇಂದು) ನಡೆದಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಸಾವನ್ನಪ್ಪಿದ್ದಾನೆ.

ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ. ಉಜಿರೆ‌ ಎಸ್.ಡಿ.ಎಮ್ ಕಾಲೇಜಿನ ಮೆಕ್ಯಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಎಂದು ಗುರುತಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!