ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ವ್ಯಕ್ತಿ ಸಾವು: ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿಯಲ್ಲಿ ಘಟನೆ

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ವ್ಯಕ್ತಿ ಸಾವು: ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿಯಲ್ಲಿ ಘಟನೆ

ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ವಿದ್ಯುತ್‌ಶಾಕ್‌ಗೆ ಒಳಗಾಗಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ಎಂಬಲ್ಲಿ ನ.24ರಂದು ಸಂಭವಿಸಿದೆ.

ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (46) ಮೃತಪಟ್ಟವರಾಗಿದ್ದಾರೆ. ಇಂದು ಬೆಳಿಗ್ಗೆ ಸ್ಥಳೀಯರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು, ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್‌ಲೈನ್‌ಗೆ ತಾಗಿ ವಿದ್ಯುತ್‌ಶಾಕ್ ತಗಲಿದೆ. ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಅವರನ್ನು ತಕ್ಷಣವೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಆವೇಳೆಗಾಲೇ ಅವರು ಮೃತಪಟ್ಟಿದ್ದರು.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳೂ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!