ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಸಿ.ಎಂ.ಸಿದ್ದರಾಮಯ್ಯ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!

ಬೆಳ್ತಂಗಡಿ : ಸಿ.ಎಂ.ಸಿದ್ದರಾಮಯ್ಯ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!

ಬೆಳ್ತಂಗಡಿ : ಸಿ.ಎಂ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ನ.19 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದಾರೆ.  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿಯಾಗಿರುವ ಬಿಜೆಪಿ ಕಾರ್ಯಕರ್ತ  ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಎಂಬಾತ ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಯ್ಯನವರಿಗೆ ಕೆಟ್ಟ ಪದಗಳಿಂದ ಬೈದು, ಅಶ್ಲೀಲವಾಗಿ ನಿಂದಿಸಿ, ಆ ಸಂಭಾಷಣಾ ವಾಯ್ಸ್ ರೆಕಾರ್ಡ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದರ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿಯ ವಿರುದ್ಧ ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!