ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ: ಮನೆಗೆ ನುಗ್ಗಿ ಕೊಲೆಗೈದ ಹಂತಕರು

ಬೆಂಗಳೂರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ: ಮನೆಗೆ ನುಗ್ಗಿ ಕೊಲೆಗೈದ ಹಂತಕರು

 

 

ಬೆಂಗಳೂರು:  ಮಹಿಳಾ ಅಧಿಕಾರಿಯ ಮನೆಗೆ ತಡರಾತ್ರಿ  ನುಗ್ಗಿ  ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ  ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ ಎಸ್ (37) ಕೊಲೆಯಾದವರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡ್ಕಿ ಮೂಲದ ಪ್ರತಿಮಾಗೆ 18 ವರ್ಷಗಳ ಹಿಂದೆ ವಿವಾಹವಾಗಿತ್ತು. ನಂತರ ಭೂ ವಿಜ್ಞಾನ ಇಲಾಖೆಯಲ್ಲಿ ನೌಕರಿ ದೊರೆತಿದ್ದರಿಂದ ಪ್ರತಿಮಾ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. 2017ರಲ್ಲಿ ರಾಮನಗರ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪ್ರತಿಮಾ ನಂತರ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಚೇರಿಯಿಂದ ಮನೆಗೆ ಪ್ರತಿಮಾ ಅವರನ್ನು ಕಾರು ಚಾಲಕ ಡ್ರಾಪ್‌ ಮಾಡಿ ತೆರಳಿದ್ದ. ಬಳಿಕ ರಾತ್ರಿ ವೇಳೆ ಹಂತಕರು ಬಂದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಮನೆಯೊಳಗೆ ಬಂದು ಕೊಲೆ ಮಾಡಿ ಹೋಗಿರುವುದರಿಂದ ಪೂರ್ವನಿಯೋಜಿತ ಕೃತ್ಯವೆಂದು ಶಂಕಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!