ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ : ಮಹಾಸಭೆ, ಹಕ್ಕೋತಾಯ ಮತ್ತು ಜಾಲಬಂಧ ತರಬೇತಿ

ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ : ಮಹಾಸಭೆ, ಹಕ್ಕೋತಾಯ ಮತ್ತು ಜಾಲಬಂಧ ತರಬೇತಿ

ಬೆಳ್ತಂಗಡಿ: ಎಲ್ಲಾ ಮಹಿಳೆಯರು ಸ್ವಾವಲಂಬಿಗಳಾಗಬೇಕು, ತಮಗೆ ಇರುವ ಹಕ್ಕುಗಳ ಬಗ್ಗೆ ಅರಿತು ಉದ್ಯೋಗ ಖಾತ್ರಿ ಯೋಜನೆ ಮತ್ತು ಇತರ ಸರಕಾರಿ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದು ತಾಲೂಕು ಪಂಚಾಯತ್ ಸಂಯೋಜನಾಧಿಕಾರಿ ಜಯಾನಂದ ಅವರು ಹೇಳಿದ್ದಾರೆ.

ಅವರು ಡಿ.18 ರಂದು ಸಾನ್ ತೋಮ್ ಟವರ್ ಬೆಳ್ತಂಗಡಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಮಂಜುಳಾ ಜೋನ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಮಹಾಸಭೆ ಹಾಗೂ ಹಕ್ಕೋತಾಯ ಮತ್ತು ಜಾಲಬಂಧ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಬಿನೋಯಿ ಎ. ಜೆ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಒಕ್ಕೂಟದ ಹಿಂದಿನ ಸಭೆಯ ವರದಿಯನ್ನು ಹಾಗೂ ಒಕ್ಕೂಟದ ವತಿಯಿಂದ ಆಯೋಜಿಸಿದ ಕಾರ್ಯಕ್ರಮಗಳ ವರದಿಯನ್ನು ಕಾರ್ಯದರ್ಶಿ ಲಲಿತರವರು ಮಂಡಿಸಿದರು. ಒಕ್ಕೂಟದ ಲೆಕ್ಕ ಪರಿಶೋಧನಾ ವರದಿಯನ್ನು ಕೋಶಾಧಿಕಾರಿ ಎಲಿಯಮ್ಮ ತೋಮಸ್ ರವರು ಮಂಡಿಸಿದರು. ಈ ಸಂದರ್ಭದಲ್ಲಿ ಮುಂದಿನ ಕ್ರಿಯಾಯೋಜನೆಯನ್ನು ತಯಾರಿಸಲಾಯಿತು.

ಗ್ರಹ ರಕ್ಷಕ ದಳದ ಮುಖ್ಯಾಧಿಕಾರಿಯಾಗಿ ನಿಷ್ಠೆ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸಿದ ಜಯಾನಂದ ಇವರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಡಿ .ಕೆ .ಆರ್. ಡಿ .ಎಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು, ಒಕ್ಕೂಟದ ಸದಸ್ಯರು ಭಾಗಹಿಸಿದ್ದರು.

ಒಕ್ಕೂಟದ ಸದಸ್ಯರಾದ ಸಂಧ್ಯಾ ಪ್ರಾರ್ಥಿಸಿ, ಕಾರ್ಯದರ್ಶಿ ಲಲಿತ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಉಷಾ ವಂದಿಸಿ, ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!