ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತ: ಇಬ್ಬರು ಸಜೀವ ದಹನ..!

ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತ: ಇಬ್ಬರು ಸಜೀವ ದಹನ..!

ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಟಿಪ್ಪರ್‌ನ ಡೀಸೆಲ್ ಟ್ಯಾಂಕರ್ ಸ್ಫೋಟಿಸಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ-ಬಂಬರಗಾ ಕ್ರಾಸ್ ಬಳಿ ನಡೆದಿದೆ.

ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್‌ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಡಿಸಿಪಿ ಪಿವ್ಹಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿಪ್ಪರ್ ಡ್ರೆöÊವರ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!