ತಮಿಳುನಾಡಿನ ಉತ್ತರ ಕರಾವಳಿಯ ಬಳಿ ಸುಳಿಗಾಳಿ ಬೀಸಿರುವುದರ ಪರಿಣಾಮವಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರದ ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ 7.3 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದೆ.