ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 7 ವರ್ಷದಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ: ಚಾರ್ಮಾಡಿ ಪ್ರದೇಶದಲ್ಲಿ ಧರ್ಮಸ್ಥಳ ಖಾಕಿ ಬಲೆಗೆ: ಆರೋಪಿಗೆ ನ್ಯಾಯಾಂಗ ಬಂಧನ

7 ವರ್ಷದಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ: ಚಾರ್ಮಾಡಿ ಪ್ರದೇಶದಲ್ಲಿ ಧರ್ಮಸ್ಥಳ ಖಾಕಿ ಬಲೆಗೆ: ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಕಳೆದ 7ವರ್ಷದಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಸೆರೆ ಹಿಡಿದು ಬಂಧಿಸಿದ್ದಾರೆ.

ಚಾರ್ಮಾಡಿ ಗ್ರಾಮದ ಮೂಡಾಯಿಬೆಟ್ಟು ನಿವಾಸಿ ಅಣ್ಣು ಪೂಜಾರಿ ಮಗನಾದ ಸದಾನಂದ(44) ಎಂಬವರು ಚೆಕ್ ಬೌನ್ಸ್ ಪ್ರಕರಣದ ವಾರಂಟ್ ಆರೋಪಿಯಾಗಿದ್ದು 7 ವರ್ಷದಿಂದ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಜ.19 ರಂದು ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ರವರ ಮಾರ್ಗದರ್ಶನದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ರಾಜೇಶ.ಎನ್ ಮತ್ತು ಗೋವಿಂದ ರಾಜ್ ರವರು ಚಾರ್ಮಾಡಿ ಪ್ರದೇಶದಲ್ಲಿ ಆರೋಪಿಯನ್ನು ಸೆರೆಹಿಡಿದು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯವು ಆರೋಪಿಗೆ ಫೆ.1 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!