ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಪ್ರಧಾನಮಂತ್ರಿ ದೇವೇಗೌಡ: ಶ್ರೀ ದೇವರ ದರ್ಶನ ಪಡೆದ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಪ್ರಧಾನಮಂತ್ರಿ ದೇವೇಗೌಡ: ಶ್ರೀ ದೇವರ ದರ್ಶನ ಪಡೆದ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ

ಬೆಳ್ತಂಗಡಿ : ಮಾಜಿ ಪ್ರಧಾನಮಂತ್ರಿ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ ಅವರು ಜ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಜ.25 ರಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಸನದಿಂದ ಕಾರಿನ ಮೂಲಕ ದಂಪತಿಗಳು ಆಗಮಿಸಿದ್ದು, ಈ ವೇಳೆ ಧರ್ಮಸ್ಥಳದ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಹೂವಿನ ಹಾರ ಹಾಕಿ ಸ್ವಾಗತಿಸಿದರು.

 

ಬಳಿಕ ರಾತ್ರಿ ಸನ್ನಿಧಿಯ ವಸತಿ ಗೃಹದಲ್ಲಿದ್ದು ಜ.26 ರಂದು ಬೆಳಗ್ಗೆ ಧರ್ಮಸ್ಥಳ ದೇವಾಲಯಕ್ಕೆ ಆಗಮಿಸಿದ್ದಾರೆ. ಈ ವೇಳೆ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ದಂಪತಿಗಳು ಶ್ರೀ ದೇವರ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲಿಂದ ಸನ್ನಿಧಿ ವಸತಿ ಗೃಹದಲ್ಲಿ ವಿಶ್ರಾಂತಿ ಪಡೆದು, ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!