ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್:

ಬೆಳ್ತಂಗಡಿ, ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್:

 

 

ಬೆಳ್ತಂಗಡಿ: ಅನಾರೋಗ್ಯದಿಂದಾಗಿ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು   ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

 

 

 

ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ್‌ ಬಂಗೇರ ಅವರು ಎಐಸಿಸಿ ಸದಸ್ಯರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ಆಶಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ಈಗಾಗಲೇ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು ಯಾರೂ ಕೂಡ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಬಂಗೇರ ಅವರ ಆಪ್ತರೊಬ್ಬರು ಮಾಹಿತಿ ನೀಡಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!