ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಳ್ತಂಗಡಿ ಭೇಟಿ: ರಾತ್ರಿಯೂ ಕುಂದದ ಬಿಜೆಪಿ ಕಾರ್ಯಕರ್ತರ ಉತ್ಸಾಹ: ಮೆರವಣಿಗೆ ಮೂಲಕ ರಾಜ್ಯಾಧ್ಯಕ್ಷರಿಗೆ ಭವ್ಯ ಸ್ವಾಗತ:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಳ್ತಂಗಡಿ ಭೇಟಿ: ರಾತ್ರಿಯೂ ಕುಂದದ ಬಿಜೆಪಿ ಕಾರ್ಯಕರ್ತರ ಉತ್ಸಾಹ: ಮೆರವಣಿಗೆ ಮೂಲಕ ರಾಜ್ಯಾಧ್ಯಕ್ಷರಿಗೆ ಭವ್ಯ ಸ್ವಾಗತ:

 

 

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ ಬಿ. ವೈ.ವಿಜಯೇಂದ್ರ ಅವರು ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ್ದು ಈ ವೇಳೆ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಅವರಿಗೆ ಅಭೂತಪೂರ್ವ ಸ್ವಾಗತವನ್ನು ಬಿಜೆಪಿ ಕಾರ್ಯಕರ್ತರು ನೀಡಿದರು. ಜ 30 ರಂದು ಮಂಗಳೂರಿಗೆ ಆಗಮಿಸಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ರಾತ್ರಿ ಬೆಳ್ತಂಗಡಿಗೆ ಆಗಮಿಸಿದರು. ಈ ವೇಳೆ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿ ಬೆಳ್ತಂಗಡಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿ ಪುಂಜಾಲಕಟ್ಟೆಯಿಂದ ಬೈಕ್ ರ್ಯಾಲಿ ನಡೆಸಿದರು.ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಪುಂಜಾಲಕಟ್ಟೆಯಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ರಾಜ್ಯಾಧ್ಯಕ್ಷರು ಬರುವಾಗ ತಡ ರಾತ್ರಿಯಾದರೂ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ   ಕಾದು ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!