ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಟವಾಡುತಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದು ಸಾವು: ಬೆಳ್ತಂಗಡಿಯ ಪಣಕಜೆ ಬಳಿ ನಡೆದ ಘಟನೆ:

ಆಟವಾಡುತಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದು ಸಾವು: ಬೆಳ್ತಂಗಡಿಯ ಪಣಕಜೆ ಬಳಿ ನಡೆದ ಘಟನೆ:

 

 

ಬೆಳ್ತಂಗಡಿ : ಆಟವಾಡುತಿದ್ದ ಬಾಲಕನೊಬ್ಬ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಣಕಜೆ ಎಂಬಲ್ಲಿ ಜ 15 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಮೊಹಮ್ಮದ್ ಹನೀಫ್ ಎಂಬವರ ಎರಡನೇ ಪುತ್ರ ಎರಡನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅನಾನ್(7) ಜ.15 ರಂದು ಸಂಜೆ ಮನೆಯ ಪಕ್ಕದ ಮಕ್ಕಳ ಜೊತೆ ಆಟ ಆಡಲು ಹೋಗಿದ್ದ. ಪಕ್ಕದ ಮನೆಯ ಬಾವಿ ಕಟ್ಟೆ ಇಲ್ಲದ ಬಾವಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮನೆಯವರು ತಕ್ಷಣ ಮಗುವನ್ನು ಬಾವಿಯಿಂದ ತೆಗೆದು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆತಂದರೂ ಅಷ್ಟೊತ್ತಿಗಾಗಲೇ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರಕ್ಷಿತ್ ಶಿವರಾಂ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!