ಮದಡ್ಕದ ಅಬುಸಾಲಿ ಮಕ್ಕಳಾದ ಆರೋಪಿ ನಿಸಾರ್ ಮತ್ತು ರೌಫ್ ಸಹೋದರರು ಇಬ್ಬರನ್ನು ಜ.24 ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯ ವಿವರ : ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕರು , ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಸದ್ರಿ ಸ್ಥಳವನ್ನು ಒತ್ತುವರಿಸಿದ ನಸೀರ್ ಮತ್ತು ರೌಫ್ ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಪ್ರತೀಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.