ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪ್ರಾಪ್ತ ಮಗಳ ಮೇಲೆ ಪದೇ ಪದೆ ಲೈಂಗಿಕ ದೌರ್ಜನ್ಯ: ಕಿರಿಯ ಪುತ್ರಿಗೆ ಲೈಂಗಿಕ ಕಿರುಕುಳ: ಕಾಮುಕ ತಂದೆಗೆ 123 ವರ್ಷ ಜೈಲು ಶಿಕ್ಷೆ..!

ಅಪ್ರಾಪ್ತ ಮಗಳ ಮೇಲೆ ಪದೇ ಪದೆ ಲೈಂಗಿಕ ದೌರ್ಜನ್ಯ: ಕಿರಿಯ ಪುತ್ರಿಗೆ ಲೈಂಗಿಕ ಕಿರುಕುಳ: ಕಾಮುಕ ತಂದೆಗೆ 123 ವರ್ಷ ಜೈಲು ಶಿಕ್ಷೆ..!

ಕೇರಳ: ಅಪ್ರಾಪ್ತ ಮಗಳ ಮೇಲೆ ಪದೇ ಪದೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೊಬ್ಬನಿಗೆ ಫೆ.06ರಂದು ಕೇರಳದ ನ್ಯಾಯಾಲಯ 123 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕೇರಳದಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳ ಪೈಕಿ, ಹಿರಿಯ ಮಗಳ ಮೇಲೆ ಮನೆಯಲ್ಲಿ ಮತ್ತು ಮನೆಯ ಹೊರಗೆ ಪದೇ ಪದೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಆತ ತನ್ನ ಕಿರಿಯ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ತನ್ನ ಹೆಂಡತಿ ಅಂಗನವಾಡಿ ಶಿಕ್ಷಕಿಯಾಗಿದ್ದು, ತಾಯಿ ಮನೆಯಲ್ಲಿ ಇಲ್ಲದ ವೇಳೆ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಕಿರಿಯ ಪುತ್ರಿ ತನ್ನ ತಾಯಿಗೆ ತಿಳಿಸಿದ್ದಳು. ಬಳಿಕ ತಾಯಿ ತನ್ನ ಸಹೋದ್ಯೋಗಿಗಳಿಗೆ ಗಂಡನ ಕೃತ್ಯದ ಬಗ್ಗೆ ಹೇಳಿಕೊಂಡಿದ್ದು, ಜೊತೆಗೆ ಅವರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕಾಮುಕ ತಂದೆಗೆ 123 ವರ್ಷಗಳ ಜೈಲು ಶಿಕ್ಷೆ..!

ಐಪಿಸಿಯ ಸೆಕ್ಷನ್ 376(3) (16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ) ಮತ್ತು ಸೆಕ್ಷನ್ 5(l) (ಪುನರಾವರ್ತಿತ ಲೈಂಗಿಕ ದೌರ್ಜನ್ಯ) ಮತ್ತು 5(m) ಅಪರಾಧಗಳಿಗಾಗಿ ನ್ಯಾಯಾಲಯವು ವ್ಯಕ್ತಿಗೆ ತಲಾ 40 ವರ್ಷಗಳ ಶಿಕ್ಷೆ ವಿಧಿಸಿದೆ. (12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ) ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಮತ್ತು ಲೈಂಗಿಕವಾಗಿ ಹಿರಿಯ ಮಗಳ ಮೇಲೆ ಹಲ್ಲೆ ನಡೆಸಿರುವ ಅಪರಾಧಕ್ಕಾಗಿ ಬಾಲಾಪರಾಧ ನ್ಯಾಯ ಕಾಯ್ದೆಯ ಸೆಕ್ಷನ್ 75 (ಮಗುವಿನ ಮೇಲಿನ ಕ್ರೌರ್ಯ) ಅಡಿ ಮೂರು ವರ್ಷಗಳು ಸೇರಿದಂತೆ ಒಟ್ಟು 123 ವರ್ಷಗಳವರೆಗೆ ಅಪರಾಧಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಅಲ್ಲದೇ ಆತನಿಗೆ ಒಟ್ಟು 7 ಲಕ್ಷ ರೂಪಾಯಿ ದಂಡವನ್ನು ಕೂಡಾ ಹಾಕಿದೆ.

ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಬೇಕಾಗಿರುವುದರಿಂದ ಮೊದಲ ಪ್ರಕರಣದಲ್ಲಿ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ ಎಂದ ಪಬ್ಲಿಕ್ ಪ್ರಾಸಿಕ್ಯೂಟರ್ ಕಿರಿಯ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನ್ಯಾಯಾಲಯವು ಆ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ಒಟ್ಟು 1.85 ಲಕ್ಷ ರೂ. ದಂಡ ವಿಧಿಸಿದೆ. ಜೊತೆಗೆ ಕಿರಿಯ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಇದೇ ವ್ಯಕ್ತಿಗೆ, ಮಂಜೇರಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಧೀಶ ಅಶ್ರಫ್ ಎ.ಎಂ. ಅವರು 3 ವರ್ಷಗಳ ಶಿಕ್ಷೆ ವಿಧಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!