ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಖಾಸಗಿ ಬಸ್‌ಗೆ ಲಾರಿ ಡಿಕ್ಕಿ..!: 7 ಪ್ರಯಾಣಿಕರು ಸಾವು : 15 ಮಂದಿಗೆ ಗಂಭೀರ ಗಾಯ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ..!

ಖಾಸಗಿ ಬಸ್‌ಗೆ ಲಾರಿ ಡಿಕ್ಕಿ..!: 7 ಪ್ರಯಾಣಿಕರು ಸಾವು : 15 ಮಂದಿಗೆ ಗಂಭೀರ ಗಾಯ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ..!

ಆಂಧ್ರಪ್ರದೇಶ: ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದು 7 ಮಂದಿ ಸಾವನ್ನಪ್ಪಿದ ಘಟನೆ ಫೆ.10 ರಂದು ಆಂಧ್ರಪ್ರದೇಶದ ನೆಲ್ಲೂರಿನ ಕವಲಿಯ ಮುಸುನೂರು ಟೋಲ್ ಪ್ಲಾಜಾ ಬಳಿ ನಸುಕಿನ ಜಾವ ಸಂಭವಿಸಿದೆ.

ಮುಸುನೂರು ಟೋಲ್ ಪ್ಲಾಜಾ ಬಳಿ ಮೊದಲು ನಿಂತ ಲಾರಿಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ. ಬಳಿಕ ಚೆನೈನಿಂದ ಹೈದರಾಬಾದ್‌ಗೆ ಬರುತ್ತಿದ್ದ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಬಸ್‌ನಲ್ಲಿದ್ದ ಚಾಲಕ ಸಮೇತ 7 ಮಂದಿ ಸಾವನ್ನಪ್ಪಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸದ್ಯ ಅಪಘಾತದ ಸ್ಥಳದಲ್ಲಿ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯ ನಡೆಸುತ್ತಿದ್ದು ಅಪಘಾತಕ್ಕೀಡಾದ ವಾಹನಗಳನ್ನು ಕ್ರೇನ್ ಮೂಲಕ ತೆರವುಗೊಳಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!