ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು: ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಮಗ ರಸ್ತೆ ಅಪಘಾತಕ್ಕೆ ಬಲಿ:

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು: ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಮಗ ರಸ್ತೆ ಅಪಘಾತಕ್ಕೆ ಬಲಿ:

 

 

 

ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಉಮೇಶ್ ಪೂಜಾರಿಯವರ ಮಗ ಧರಣೇಂದ್ರ ಪೂಜಾರಿ (24) ಎಂದು ಗುರುತಿಸಲಾಗಿದೆ.

 

 

ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಗೆ ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಅತೀ ವೇಗದಲ್ಲಿ ಸಂಚಾರಿಸುತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಬಸ್ಸಿನಡಿ ಸಿಲುಕಿದ್ದು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದು ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋಗೆ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತಿದ್ದ ಧರಣೇಂದ್ರ ಪೂಜಾರಿಯವರ ತಂದೆ ವಿಕಲಚೇತನರಾಗಿದ್ದು ಕುಟುಂಬದ ಜೀವನ ನಿರ್ವಹಣೆ ಇವರ ದುಡಿಮೆಯಲ್ಲೇ ಸಾಗುತಿತ್ತು ಎನ್ನಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!