ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ, ವಿಧಾನ ಸೌಧದ ಎದುರು ಬಿಜೆಪಿಯಿಂದ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ: "ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ" ಭಿತ್ತಿಪತ್ರ ಪ್ರದರ್ಶಿಸಿದ ಶಾಸಕ ಹರೀಶ್ ಪೂಂಜ..!

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ, ವಿಧಾನ ಸೌಧದ ಎದುರು ಬಿಜೆಪಿಯಿಂದ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ: "ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ" ಭಿತ್ತಿಪತ್ರ ಪ್ರದರ್ಶಿಸಿದ ಶಾಸಕ ಹರೀಶ್ ಪೂಂಜ..!

 

 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್, ಅಭಿವೃದ್ಧಿ ವಿರೋಧಿ ಬಜೆಟ್ ಎಂದು ಬಿಜೆಪಿ ಸದಸ್ಯರು ವಿಧಾನಸೌಧ ದ್ವಾರದ ಎದುರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಬಜೆಟ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಸದಸ್ಯರು ಬಳಿಕ ವಿಧಾನಸಭೆ ಪ್ರವೇಶದ್ವಾರದ ಬಳಿ ಆಗಮಿಸಿ ಪ್ರತಿಭಟನೆ ನಡೆಸಿ ಬಜೆಟ್ ‘ಅಭಿವೃದ್ಧಿ’ ವಿರೋಧಿಯಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಿಡಿದ "ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ" ಭಿತ್ತಿಪತ್ರ ಗಮನ ಸೆಳೆದಿದೆ.

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಿ ರೂಪಾಯಿ ಅನುದಾನಗಳ ಜೊತೆಗೆ ವಸತಿ ಶಾಲೆ, ಕಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಜೊತೆಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸಭೆ ಪ್ರವೇಶದ್ವಾರದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ "ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ"ಭಿತ್ತಿಪತ್ರ ಗಮನ ಸೆಳೆದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!