ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಮ ಭಕ್ತರು ಹಾಗೂ ಮೂವರು ಯುವಕರ ಮಧ್ಯೆ ವಾಗ್ವಾದ: ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ

ರಾಮ ಭಕ್ತರು ಹಾಗೂ ಮೂವರು ಯುವಕರ ಮಧ್ಯೆ ವಾಗ್ವಾದ: ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ

ಬಳ್ಳಾರಿ: ಅಯೋಧ್ಯೆಯಿಂದ ಮೈಸೂರಿಗೆ ಬರುತ್ತಿದ್ದ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಹಾಕಿದ ಘಟನೆ ಬಳ್ಳಾರಿಯ ಹೊಸಪೇಟೆ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೈಸೂರಿನಿಂದ ಅಯೋಧ್ಯೆಗೆ ತೆರಳಿದ್ದ ರಾಮ ಭಕ್ತರು ಮರಳಿ ರೈಲಿನಲ್ಲಿ ಮೈಸೂರಿಗೆ ಬರುತ್ತಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ರಾಮ ಭಕ್ತರು ಹಾಗೂ ಮೂವರು ಯುವಕರ ಮಧ್ಯೆ ವಾಗ್ವಾದ ನಡೆದಿದೆ. ಜಗಳ ಶುರುವಾದ ವೇಳೆ ಪದೇ ಪದೇ ಚೈನ್ ಎಳೆದ ಕಾರಣ ರೈಲು ಮುಂದೆ ಸಾಗಲು ತೊಂದರೆಯಾಗಿದ್ದು ಸುಮಾರು ಎರಡು ಘಂಟೆಗಳ ಕಾಲ ತಡವಾಗಿ ಚಲಿಸಿದೆ.

ಪರಿಸ್ಥಿತಿ ವಿಕೋಪಕ್ಕೆ ತೆರಳುವ ಮುನ್ನವೇ ಸ್ಥಳಕ್ಕೆ ಆಗಮಿಸಿದ ಎಸ್ಪಿ ಶ್ರೀಹರಿಬಾಬು ಹಾಗೂ ಸಿಬ್ಬಂದಿ, ಎಲ್ಲರ ಮನವೊಲಿಸಿ, ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ರೈಲು ಹೊರಡುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಶ್ರೀರಾಮನ ಭಕ್ತರು ನಿಲ್ದಾಣದಲ್ಲೇ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!