ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಧರ್ಮಸ್ಥಳದ ನಿವಾಸಿ, 16 ವರ್ಷದ ವಿದ್ಯಾರ್ಥಿನಿ ಬಗ್ಗೆ ಅದೇ ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಇನ್ನೊಂದು ವಿದ್ಯಾರ್ಥಿನಿಗೆ ಅವಮಾನ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಇದನ್ನು ಆ ವಿದ್ಯಾರ್ಥಿನಿ ಈಕೆಗೆ ತಿಳಿಸಿದ್ದಳು. ಬಳಿಕ ಮೃತಪಟ್ಟ ವಿದ್ಯಾರ್ಥಿನಿ ಈ ವಿಷಯವನ್ನು ಮನೆಯವರಿಗೆ ತಿಳಿಸಿ, ತಾಯಿ ಜೊತೆ ಶಾಲೆಗೆ ಹೋಗಿ ವಿಚಾರಿಸಿದ್ದಾಳೆ. ಆದರೆ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಣ ಪೆಸ್ಟ್ ಅಂಗಡಿಯಿAದ ಖರೀದಿ ಮಾಡಿ ತಂದು ಶಾಲೆಯಲ್ಲಿ ಬಿಸ್ಕೆಟ್ ಜೊತೆ ಪೆಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಸೇರಿ ಆ್ಯಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವಿದ್ಯಾರ್ಥಿನಿಯನ್ನು ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ವಿದ್ಯಾರ್ಥಿನಿಯ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಪ್ರಕರಣ ಆರೋಪಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ IPC 354D,509,POSO Act 12 ,75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಡ್ರಾಯಿಂಗ್ ಶಿಕ್ಷಕ ಆರೋಪಿ ರೂಪೇಶ್ ಪೂಜಾರಿಯನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದು ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.