ಮೂವರು ಅಕ್ಕ - ತಂಗಿಯರು ಮೇಲಿನ ಮಹಡಿಯಲ್ಲಿ ಮಲಗಿದ್ದರು. ಇಂದು ಮುಂಜಾನೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ನೋಡು ನೋಡುತ್ತಿದ್ದಂತೆ ಇಡೀ ಮನೆಗೆ ಬೆಂಕಿ ಆವರಿಸಿತ್ತು. ಈ ವೇಳೆ ಮನೆಯಿಂದ ಹೊರಬರಲಾಗದೆ ಮೂವರು ಅಕ್ಕ – ತಂಗಿಯರು ಸಜೀವ ದಹನಗೊಂಡಿದ್ದಾರೆ. ಮೃತರನ್ನು ಬಿಸ್ಮಾ (18), ಸೈಕಾ (14) ಮತ್ತು ಸಾನಿಯಾ (11) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ ಬಳಿಕ ಮೂವರು ಸಹೋದರಿಯರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.