ಹೋಶಂಗಾಬಾದ್‍ನಿಂದ ರೈಸನ್‌ನ ಪಿಪಾರಿಯಾ ಗ್ರಾಮಕ್ಕೆ ಮದುವೆ ಮೆರವಣಿಗೆ ಬಂದಿದ್ದ ಸಂದರ್ಭ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮದುವೆ ಮೆರವಣಿಗೆ ಮೇಲೆ ಹರಿದಿದೆ. ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರು ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಬಗ್ಗೆ ಪೊಲೀಸರು ತನಿಖೆಯಲ್ಲಿ ನಿರತರಾಗಿದ್ದಾರೆ. ರೈಸನ್‌ನಲ್ಲಿ ನಡೆದ ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕುಟುಂಬಕ್ಕೆ ತಲಾ 4 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಧನಸಹಾಯ ಘೋಷಿಸಲಾಗಿದೆ