ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೋಕಸಭೆ ಚುನಾವಣೆ -2024, ಅನಧಿಕೃತ ಫ್ಲೆಕ್ಸ್ ,ಬೋರ್ಡ್, ತೆರವು ಕಾರ್ಯ ಪ್ರಾರಂಭ:

ಲೋಕಸಭೆ ಚುನಾವಣೆ -2024, ಅನಧಿಕೃತ ಫ್ಲೆಕ್ಸ್ ,ಬೋರ್ಡ್, ತೆರವು ಕಾರ್ಯ ಪ್ರಾರಂಭ:

 

 

ಬೆಳ್ತಂಗಡಿ: ಲೋಕಸಭೆ ಚುನಾವಣೆಯ ದಿನಾಂಕವನ್ನು ಇನ್ನೆರಡು ದಿನದಲ್ಲಿ ಚುನಾವಣಾ ಆಯೋಗ ನಿಗದಿಗೊಳಿಸುವ ನಿರೀಕ್ಷೆ ಇದ್ದು ಅವತ್ತಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೇ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಹೋರ್ಡಿಂಗ್ಸ್, ಬೋರ್ಡಿಂಗ್ಸ್ ಅಳವಡಿಸಿರುವುದನ್ನು ತೆರವುಗೊಳಿಸುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ತಾಲೂಕಿನ ಎಲ್ಲಾ ಪಂಚಾಯತ್ ಗಳಿಗೆ ಈಗಾಗಲೇ ಸೂಚನೆ ನೀಡಿದ ಹಿನ್ನೆಲೆಯಲ್ಲಿ. ಕೆಲವು ಕಡೆಗಳಲ್ಲಿ ತೆರವು ಕಾರ್ಯ ಪ್ರಾರಂಭವಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್ ಸೇರಿದಂತೆ ಇತರ ಬೋರ್ಡ್ ಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭಿಸಲಾಗಿದೆ.

ನೀತಿ ಸಂಹಿತೆ ಘೋಷಣೆಯಾದ ತಕ್ಷಣದಿಂದಲೇ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿAಗ್ಸ್, ಹೋರ್ಡಿಂಗ್ಸ್, ಬೋರ್ಡಿಂಗ್ಸ್ ಇತ್ಯಾದಿಗಳನ್ನು ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 12 ಗಂಟೆಯೊಳಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕು ಎಂದು ಸೂಚಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!