ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್ ಐ ಪರೀಕ್ಷೆ ಮುಂದೂಡಿಕೆ: ಮೇ 8ಕ್ಕೆ ನಿಗಧಿಯಾಗಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆ

ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್ ಐ ಪರೀಕ್ಷೆ ಮುಂದೂಡಿಕೆ: ಮೇ 8ಕ್ಕೆ ನಿಗಧಿಯಾಗಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆ

ಬೆಂಗಳೂರು: ಮೇ 8ಕ್ಕೆ ನಿಗದಿಯಾಗಿದ್ದ ಪಿಎಸ್ ಐ ಪರೀಕ್ಷೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್), ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಿತ್ತು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವ ಮೇ.8ಕ್ಕೆ ನಿಗದಿಯಾದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮುಂದಿನ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೈಬ್‌ಸೈಟ್‌ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!