ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡಿಸೇಲ್ ಪೈಪ್ ಲೈನ್ ಕೊರೆದ ಕಳ್ಳರು: 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡಿಸೇಲ್ ಪೈಪ್ ಲೈನ್ ಕೊರೆದ ಕಳ್ಳರು: 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಡಿಸೇಲ್ ಪೈಪ್ ಲೈನ್ ನಲ್ಲಿ ರಂದ್ರ ಕೊರೆದು 2.5 ಇಂಚು ಹೆಚ್ ಡಿಪಿಇ ಪೈಪ್ ಮೂಲಕ ಅಂದಾಜು 12,000 ಲೀ. ಡಿಸೇಲ್ ನ್ನು ಕಳವು ಮಾಡಿದ್ದಾರೆ. ಕಳವಾದ ಡಿಸೇಲ್ ನ ಮೌಲ್ಯ ರೂ 9,60,000 ಎಂದು ಪರಿಗಣಿಸಲಾಗಿದೆ.

ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 19/2024 ಕಲಂ: 427,285, 379 ಐ ಪಿ ಸಿ ಕಲಂ 15(2) ಪೆಟ್ರೊನೆಟ್ ಕಾಯ್ದೆ ಕಲಂ 3(2) ಪ್ರಿವೆನ್ಸೆನ್ ಆಫ್ ಡ್ಯಾಮೆಜ್ ಟು ಪಬ್ಲಿಕ್ ಪ್ರಾಪರ್ಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!