ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಡಬ: ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ: ಇನ್ನಿಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಕಡಬ: ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ: ಇನ್ನಿಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಕಡಬ: ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡವು ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಂಮುತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿತ್ತು. ಇದೀಗ ಕೇರಳದಲ್ಲಿ ಮತ್ತಿಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಬಿನ್‍ನನ್ನು ಮಾರ್ಚ್ 5ರಂದು ಬಂಧಿಸಲಾಗಿತ್ತು. ಈತನಿಗೆ ಸಮವಸ್ತ್ರ ಹೊಲಿದು ಕೊಟ್ಟ ವ್ಯಕ್ತಿ ಹಾಗೂ ಆನ್‍ಲೈನ್ ಮೂಲಕ ಆ್ಯಸಿಡ್ ಖರೀದಿಸಿ ಕೊಟ್ಟಿದ್ದ ವ್ಯಕ್ತಿಯನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!