Home › ಶಿರಾಡಿಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ: ಭಾರಿ ಪ್ರಮಾಣದಲ್ಲಿ ಅನಿಲ ಸೋರಿಕೆ: ಮಂಗಳೂರು-ಹಾಸನ-ಬೆಂಗಳೂರು ವಾಹನ ಸಂಚಾರ ಬದಲು
ಶಿರಾಡಿಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ: ಭಾರಿ ಪ್ರಮಾಣದಲ್ಲಿ ಅನಿಲ ಸೋರಿಕೆ: ಮಂಗಳೂರು-ಹಾಸನ-ಬೆಂಗಳೂರು ವಾಹನ ಸಂಚಾರ ಬದಲು
ONLINE PUDU / Wednesday, March 13, 2024
ಶಿರಾಡಿಘಾಟ್ : ಎನ್‍ಎಚ್-75 ರ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್‍ವೊಂದು ಪಲ್ಟಿಯಾಗಿ ಟ್ಯಾಂಕರ್‍ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಇಂದು (ಮಾ.13) ಸಂಭವಿಸಿದೆ.
ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಪಲ್ಟಿಯಾದ ಗ್ಯಾಸ್ ಟ್ಯಾಂಕರ್‍ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾರ್ಗಮಧ್ಯೆ ನೂರಾರು ವಾಹನಗಳು ನಿಂತಲ್ಲೆ ನಿಂತಿವೆ. ಸದ್ಯ ಪೊಲೀಸರು ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.
ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಈ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.