ಪ್ರಕರಣವೊಂದರಲ್ಲಿ ನ್ಯಾಯ ಕೊಡಿಸುವಂತೆ ಫೆ.2 ರಂದು ಬಾಲಕಿ ಯಡಿಯೂರಪ್ಪ ಅವರ ಮನೆಗೆ ತೆರಳಿದ್ದ ವೇಳೆ ಲೈಂಗಿಕ ಕಿರುಕುಳವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಸಂತ್ರಸ್ತೆಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸದ್ಯ ಪೊಲೀಸರು ಪ್ರಕರಣದ ಸತ್ಯಾಸತ್ಯತೆಯನ್ನ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.