ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಾಜಿ ಸಿಎಂ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಿದ ರಾಜ್ಯ ಸರ್ಕಾರ: ‘ಪ್ರಕರಣ ರಾಜಕೀಯ ಪ್ರೇರಿತ ಅಲ್ಲ’ ಎಂದ ಯಡಿಯೂರಪ್ಪ

ಮಾಜಿ ಸಿಎಂ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಿದ ರಾಜ್ಯ ಸರ್ಕಾರ: ‘ಪ್ರಕರಣ ರಾಜಕೀಯ ಪ್ರೇರಿತ ಅಲ್ಲ’ ಎಂದ ಯಡಿಯೂರಪ್ಪ

ಬೆಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್‌ಐಆರ್‌ಗೆ  ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ .ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!