ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾರಿಗೆ ಬೆಂಕಿ ಹಚ್ಚಿ ಮೂವರನ್ನು ಸುಟ್ಟು ಹಾಕಿ ಕೊಲೆ ಮಾಡಿದ ಪ್ರಕರಣ : ಸಮಗ್ರ ತನಿಖೆಗೆ ಒತ್ತಾಯಿಸಿ  ಗೃಹ ಸಚಿವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ:

ಕಾರಿಗೆ ಬೆಂಕಿ ಹಚ್ಚಿ ಮೂವರನ್ನು ಸುಟ್ಟು ಹಾಕಿ ಕೊಲೆ ಮಾಡಿದ ಪ್ರಕರಣ : ಸಮಗ್ರ ತನಿಖೆಗೆ ಒತ್ತಾಯಿಸಿ  ಗೃಹ ಸಚಿವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ:

 

 

ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳಿಂದ ಕೊಲೆಗೈಯಲ್ಪಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು‌ ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು. ಇನ್ನೂ ಎರಡು ದಿನದಲ್ಲಿ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ತಿಳಿಸಲಾಗುವುದು ಎಂದು ಹೇಳಿದರು.

ಈ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!