ವಾರ್ಷಿಕವಾಗಿ 10 ಲಕ್ಷ ರೂಪಾಯಿಯಿಂದ ಒಂದು ಕೋಟಿ ರೂಪಾಯಿಯವರೆಗೆ ಆದಾಯವಿರುವ ದೇವಾಲಯಗಳಿಗೆ ಶೇಕಡ 5ರಷ್ಟು ಮತ್ತು 1 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಇರುವ ದೇಗುಲಗಳಿಗೆ ಶೇಕಡ 10ರಷ್ಟು ತೆರಿಗೆ ವಿಧಿಸುವ ಧಾರ್ಮಿಕ ದತ್ತಿ, ಧರ್ಮಾದಾಯ ತಿದ್ದುಪಡಿ ಮಸೂದೆ ಇದಾಗಿದೆ. ತಿದ್ದುಪಡಿ ಮಸೂದೆಯನ್ನು ಸಚಿವ ರಾಮಲಿಂಗಾ ರೆಡ್ಡಿ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್‍ನಲ್ಲಿ ಮಂಡಿಸಿದ್ದರು. ಆದರೆ, ಅದಕ್ಕೆ ಸೋಲಾಗಿತ್ತು. ಹೀಗಾಗಿ, ವಿಧಾನಸಭೆಯಲ್ಲಿ ಎರಡೆರಡು ಬಾರಿ ಮಂಡಿಸಿ, ಅನುಮೋದನೆ ಪಡೆದುಕೊಂಡು, ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಆದರೆ ಮಸೂದೆಗೆ ಸಹಿ ಹಾಕದೆ ವಾಪಸ್ ಕಳುಹಿಸಿರುವ ರಾಜ್ಯಪಾಲರು ಕೆಲವೊಂದು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
Home › ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ: ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲರು: ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ!