ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉತ್ತಮ ರಾಜಕಾರಣಿಯಾಗಲು ‘ರಾಜಕೀಯ ತರಬೇತಿ ಕೇಂದ್ರ’ ಆರಂಭದ ಚಿಂತನೆ: ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್

ಉತ್ತಮ ರಾಜಕಾರಣಿಯಾಗಲು ‘ರಾಜಕೀಯ ತರಬೇತಿ ಕೇಂದ್ರ’ ಆರಂಭದ ಚಿಂತನೆ: ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್

ಬೆಂಗಳೂರು: ವಿವಿಧ ಕ್ಷೇತ್ರಗಳಂತೆ ರಾಜಕೀಯ ಕ್ಷೇತ್ರದಲ್ಲಿ ವ್ಯಾಸಂಗ ಮಾಡಲು ಯಾವುದೇ ಸಂಸ್ಥೆಗಳಿಲ್ಲ. ಉತ್ತಮ ರಾಜಕಾರಣಿಯಾಗಲು ಮುಂದಿನ ದಿನಗಳಲ್ಲಿ ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ ಇದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ವಿಕಾಸ ಸೌಧದಲ್ಲಿ ಮಾ.05 ರಂದು ಕಾನೂನು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ‘ರಾಜ್ಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ' ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪತ್ರಕರ್ತರು, ವಕೀಲರು, ವೈದ್ಯರು ಸೇರಿದಂತೆ ಇತರೆ ಹಲವು ಕ್ಷೇತ್ರಗಳ ಬಗ್ಗೆ ಕಲಿಯಲು ಕಾಲೇಜು ಹಾಗು ವಿಶ್ವವಿದ್ಯಾಲಯಗಳಿವೆ. ಆದರೆ, ಉತ್ತಮ ರಾಜಕಾರಣಿಯಾಗಲು ಯಾವುದೇ ಸಂಸ್ಥೆಗಳಿಲ್ಲ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ರಾಜಕೀಯ ತರಬೇತಿ ಕೇಂದ್ರ ಪ್ರಾರಂಭಿಸುವ ಕುರಿತು ಚಿಂತನೆ ನಡೆದಿದೆ ಎಂದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!