ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಮ್ಟಾಡಿ ಪಂಚಾಯತ್ ಕಾರ್ಯದರ್ಶಿ ಲಕ್ಷೀ ನಾರಾಯಣ ನಾಪತ್ತೆ ಪ್ರಕರಣ: ಪಟ್ರಮೆ ಸಮೀಪದ ನದಿಯಲ್ಲಿ ಮೃತ ದೇಹ ಪತ್ತೆ:

ಅಮ್ಟಾಡಿ ಪಂಚಾಯತ್ ಕಾರ್ಯದರ್ಶಿ ಲಕ್ಷೀ ನಾರಾಯಣ ನಾಪತ್ತೆ ಪ್ರಕರಣ: ಪಟ್ರಮೆ ಸಮೀಪದ ನದಿಯಲ್ಲಿ ಮೃತ ದೇಹ ಪತ್ತೆ:

 

 

ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ತಾಲೂಕು ಅಮ್ಟಾಡಿ ಗ್ರಾಮಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಅವರ ಮೃತದೇಹ ಪಟ್ರಮೆ ಹೊಳೆಯಲ್ಲಿ ಭಾನುವಾರ ಪತ್ತೆಯಾಗಿದೆ. ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾ ನಗರ ನಿವಾಸಿ, ಸುಮಾರು 6 ವರ್ಷಗಳಿಂದ ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ಲಕ್ಷ್ಮೀನಾರಾಯಣ .ಕೆ. (52ವ) ಎಂಬವರು, ಮಾ.27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಅವರು ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಮನೆಯವರು ಅಮ್ಟಾಡಿ ಪಂಚಾಯತ್ ನಲ್ಲಿ ವಿಚಾರಿಸಿದಾಗ, ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿದ್ದರು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಲಿಲ್ಲ.ಲಕ್ಷ್ಮೀನಾರಾಯಣ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ಅವರ ಮನೆಯವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮಾ.31 ರಂದು ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಅವರ ಮೃತ ಪಟ್ರಮೆ ಹೊಳೆಯಲ್ಲಿ ಇದೀಗ ಪತ್ತೆಯಾಗಿದೆ. ನಾಪತ್ತೆಯಾದ ಮರುದಿನ ಪಟ್ರಮೆ ಸೇತುವೆ ಬಳಿ ಅವರ ಬೈಕ್ ದೊರಕಿತ್ತು. ಬೈಕ್ ದೊರೆತ ಬಳಿಕ ಇಲ್ಲಿ ಅವರಿಗಾಗಿ ಹುಡುಕಾಟ ನಡೆಯುತ್ತಿತ್ತು ಇಂದು ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಇದೀಗ ಕೊಳೆ ತಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರ ಬೈಕ್ ಪತ್ತೆಯಾದ ಸ್ಥಳದ ಸಮೀಪವೇ ಮೃತದೇಹ ಪತ್ತೆಯಾಗಿದ್ದು ಇದರ ಆಧಾರದಲ್ಲಿ ಶವ ನಾಪತ್ತೆ ಆಗಿರುವ ಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ. ಲಕ್ಷ್ಮೀನಾರಾಯಣ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅನುಮಾನಿಸಲಾಗಿದೆ.

ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಶವವನ್ನು ಮೇಲೆತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!