ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರ: ಸಿಎಎ ಜಾರಿಗೆ ಅಧಿ ಸೂಚನೆ ಹೊರಡಿಸಿದ ಗೃಹ ಇಲಾಖೆ:

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರ: ಸಿಎಎ ಜಾರಿಗೆ ಅಧಿ ಸೂಚನೆ ಹೊರಡಿಸಿದ ಗೃಹ ಇಲಾಖೆ:

 

 

 

 

ದೆಹಲಿ:  ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಂಮೇತರರಿಗೆ ಪೌರತ್ವ ನೀಡುವ  ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಇಂದು ಸಂಜೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡ ನಾಲ್ಕು ವರ್ಷಗಳ ಬಳಿಕ ಇದೀಗ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಕೇಂದ್ರ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸಲು ಅಧಿಸೂಚನೆ ಹೊರಡಿಸಿದೆ. ಸಿಎಎ ಜಾರಿಗೊಳಿಸಲು ಆದೇಶ ಹೊರಡಿಸಿರುವ ಮೋದಿ ಸರ್ಕಾರ, 2014ರ ಡಿಸೆಂಬರ್​ 31ರವೆರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂಗಳು, ಸಿಖ್​, ಜೈನರು, ಬೌದ್ಧರು, ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನರಿಗೆ ಭಾರತೀಯ ರಾಷ್ಟ್ರೀಯತೆ ನೀಡಲು ಪ್ರಾರಂಭಿಸಲಿದೆ.ಸಿಎಎ 2019, ಅರ್ಹರಾಗಿರುವ ವ್ಯಕ್ತಿಗಳಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಗೆ ಸಂಸತ್ತಿನಲ್ಲಿ ಅಂಗೀಕಾರ ದೊರೆತಿತ್ತು. ಆದರೆ ಅದರ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಗಳು ನಡೆದ ಕಾರಣ ಅದು ಜಾರಿಗೆ ಬಂದಿರಲಿಲ್ಲ. ಕಳೆದ ವರ್ಷ ಡಿಸೆಂಬರ್​ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು, ಇದು ದೇಶದ ಕಾನೂನಾಗಿದ್ದು, ಸಿಎಎ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಲೋಕಸಭೆಗೂ ಮುನ್ನ ಸಿಎಎ ಜಾರಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಘೋಷಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!