Home › ಲೋಕಸಭಾ ಚುನಾವಣೆ 2024: ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಶಾಸಕ ಹರೀಶ್ ಪೂಂಜ ಮತಯಾಚನೆ
ಲೋಕಸಭಾ ಚುನಾವಣೆ 2024: ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಶಾಸಕ ಹರೀಶ್ ಪೂಂಜ ಮತಯಾಚನೆ
ONLINE PUDU / Thursday, April 25, 2024
ಬೆಳ್ತಂಗಡಿ: 18ನೇ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಏ.26ರಂದು ನಡೆಯಲಿದ್ದು ಬೆಳ್ತಂಗಡಿ ತಾಲೂಕಿನಾದ್ಯಂತ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಏ.24ರಂದು ಮತಯಾಚನೆ ಮಾಡಿದ್ದಾರೆ.
ನಾರಾವಿ ಪೇಟೆ, ಅಳದಂಗಡಿ, ಕಕ್ಕಿಂಜೆ,ಮಡಂತ್ಯಾರ್ ಸೇರಿದಂತೆ ತಾಲೂಕಿನ ಅನೇಕ ಕಡೆ ಮತಯಾಚನೆ ಮಾಡಿಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ ಹಾಗೂ ಜಿಲ್ಲಾ ಮತ್ತು ತಾಲೂಕು ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.