ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ:

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ:

 

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ಅವರನ್ನು ಬಿಜೆಪಿಯಿಂದ 6 ವರ್ಷಗಳವರೆಗೆ ಉಚ್ಚಾಟನೆ ಮಾಡಲಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಇಂದು  ಕೊನೆಯ ದಿನವಾಗಿದ್ದು ಅದರೆ ಅವರು  ಲೋಕಸಭೆ ಕಣದಲ್ಲಿಯೇ ಉಳಿದುಕೊಂಡಿರುವ ಕಾರಣ ಈಶ್ವರಪ್ಪ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಭಾರತೀಯ ಜನತಾ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ''ಪಕ್ಷದ ಸೂಚನೆ ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ'' ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಉಚ್ಚಾಟನಾ​ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!