ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಆಕಾಶದಲ್ಲಿ ಪ್ರಕಾಶಮಾನವಾದ ಬೆಳಕು ಗೋಚರವಾಗಿ ಬಳಿಕ ಭಾರೀ ಪ್ರಮಾಣದ ಸದ್ದಿನೊಂದಿಗೆ ಆ ಬೆಳಕು ಭೂಮಿಗೆ ಪ್ರವೇಶ ಪಡೆದು ಯಾವುದೋ ವಸ್ತು ಆಕಾಶದಿಂದ ಭೂಮಿಗೆ ಬಿದ್ದಂತಾಗಿದೆ. ಆದರೆ, ಮುಂದೆ ಏನಾಯಿತು ಎಂಬುದು ಯಾರಿಗೂ ಗೊತ್ತಿಲ್ಲ. ಸದ್ದು ಕೇಳಿದರೆ ಅದು ಉಲ್ಕಾಶಿಲೆ ಇರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಇದುವರೆಗೂ ಈ ಪ್ರದೇಶದಲ್ಲೆಲ್ಲೂ ಅಹಿತಕರ ಘಟನೆಯಾಗಲಿ, ಯಾವುದೇ ಕುರುಹುಗಳಾಗಲಿ ಸಿಕ್ಕಿಲ್ಲ. ಸಧ್ಯ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ತನಿಖೆಯ ನಂತರವಷ್ಟೇ ಈ ಬಗ್ಗೆ ನಿಖರ ಮಾಹಿತಿ ತಿಳಿದುಬರಬೇಕಿದೆ.
Home › ರಾತ್ರಿ ಆಕಾಶದಲ್ಲಿ ಪ್ರಕಾಶಮಾನವಾದ ಬೆಳಕು ಗೋಚರ: ಭಾರೀ ಪ್ರಮಾಣದ ಸದ್ದಿನೊಂದಿಗೆ ಭೂಮಿಗೆ ಪ್ರವೇಶ: ನಿಗೂಢ ವಸ್ತು ಭೂಮಿಗೆ ಅಪ್ಪಳಿಸುತ್ತಿರುವ ವಿಡಿಯೋ ವೈರಲ್