ಇಂದು (ಏ.18) ಮಂಡ್ಯ ಲೋಕಸಭಾ ಅಖಾಡದಲ್ಲಿ ಬೆಳಗ್ಗೆಯಿಂದಲೇ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸಲಿರುವ ನಟ ದರ್ಶನ್ ಅವರು ಬಳಿಕ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ ಪಟ್ಟಣ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ(ತಳಗವಾದಿ), ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
ಸ್ಟಾರ್ ನಟ ದರ್ಶನ್ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವುದು ಸದ್ಯ ಅನೇಕರ ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ತೀವ್ರ ಕುತೂಹಲ ಕೆರಳಿಸಿದೆ.