ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ವೇಳೆ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದೆ. ಅಲ್ಲದೆ ಮಹಿಳೆಯ ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ.
ತಕ್ಷಣ ಮನೆಯವರು ಮಹಿಳೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.