ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವಾರು ಕಡೆಗಳಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಏ.18ರ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಇಂದಿನಿಂದ4 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!